ಕೊರೊನಾಗೆ ಮತ್ತೊಂದು ಬಲಿ; ಪ. ಬಂಗಾಳದಲ್ಲಿ ಮಹಿಳೆ ಸಾವು

ಸೋಮವಾರ, 30 ಮಾರ್ಚ್ 2020 (10:43 IST)
ಪಶ್ಚಿಮ ಬಂಗಾಳ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ  ಕೊರೊನಾಗೆ ಮತ್ತೊಂದು ಬಲಿಯಾಗಿದೆ.

ಪ. ಬಂಗಾಳದಲ್ಲಿ ಕೊರೊನಾ ಸೋಂಕಿನಿಂದ 45 ವರ್ಷದ ಮಹಿಳೆ ಸಾವನಪ್ಪಿದ್ದಾರೆ. ಕೊರೊನಾ ಸೋಂಕಿತ ಈ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಇದೀಗ ಸಾವನಪ್ಪಿದ್ದಾಳೆ.

 

ಪ. ಬಂಗಾಳದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ  ಇಬ್ಬರು ಬಲಿಯಾಗಿದ್ದು, ಆ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ  28ಕ್ಕೇರಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ