ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ವೈದ್ಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌: ಮೂವರು ಕಾಮಾಂಧರು ಅರೆಸ್ಟ್‌

Sampriya

ಭಾನುವಾರ, 12 ಅಕ್ಟೋಬರ್ 2025 (10:24 IST)
ಕೋಲ್ಕತ್ತ: ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ರೇಪ್‌ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿತ್ತು.

ಈವರೆಗೆ ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ವಿರೋಧ ಪಕ್ಷ ಬಿಜೆಪಿ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಪಶ್ಚಿಮ ಬಂಗಾಳದಲ್ಲೇ ಕಳೆದ ವರ್ಷ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಇದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ