ದೆಹಲಿ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಅರವಿಂದ ಕೇಜ್ರಿವಾಲ್‌ಗೆ ಮತ್ತೊಂದು ಆಘಾತ

Sampriya

ಶನಿವಾರ, 11 ಜನವರಿ 2025 (14:14 IST)
Photo Courtesy X
ನವದೆಹಲಿ: ಮದ್ಯ ನೀತಿ ಅಕ್ರಮದಿಂದಾಗಿ  ದೆಹಲಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ ₹ 2,026 ಕೋಟಿ ಆದಾಯ ನಷ್ಟವಾಗಿದೆ ಎಂದು ಸಿಎಜಿ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.

ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್‌ ನಾಯಕರು ಕಿಕ್‌ಬ್ಯಾಕ್‌ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ.  

ಮದ್ಯ ನೀತಿಯನ್ನು ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್‌ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಅಲ್ಲದೇ ಬಿಡ್‌ ದಾರರ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಿರಲಿಲ್ಲ. ಇದರೊಂದಿಗೆ ಹೆಚ್ಚುವರಿಯಾಗಿ ನಿಯಮ ವಿಧಿಸುವವರಿಗೆ ಉದ್ದೇಶಪೂರ್ವಕವಾಗಿ ದಂಡ ವಿಧಿಸುವುದನ್ನು ಕೈಬಿಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ