ಮುಸ್ಲಿಂ ವಿರೋಧಿ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್‌

Sampriya

ಶುಕ್ರವಾರ, 29 ನವೆಂಬರ್ 2024 (19:45 IST)
Photo Courtesy X
ಬೆಂಗಳೂರು: ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ  ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿದೆ. ಇದೀಗ ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಕ್ಫ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದರು. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

ಇದೀಗ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು,  ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ