ನವದೆಹಲಿ : ದೇಶದ ಎಲ್ಲ ಭಾಗದಲ್ಲೂ ಒಂದಲ್ಲ ಒಂದು ರೂಪದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.
ವಿಶ್ವದ ಮೂಲೆ ಮೂಲೆಯಲ್ಲಿರುವ ಭಾರತೀಯರು ಧ್ವಜಾರೋಹಣ ಮಾಡುತ್ತಿದ್ದಾರೆ. ಅನಿವಾಸಿ ಭಾರತೀಯರಿಗೂ ನಾನು ಶುಭಾಶಯ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಇಂದು ಬೆಳಗ್ಗೆ ರಾಜಘಾಟ್ ಗೆ ಆಗಮಿಸಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ತೆರಳಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ, ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಗೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಜನರನ್ನು ಕಾಯಿಸಲು ಸಾಧ್ಯವಿಲ್ಲ ಎಂದರು.
ಗುಲಾಮಿತನದ ವಿರುದ್ಧ ಸಾಕಷ್ಟು ಜನರು ಹೋರಾಟ ಮಾಡುತ್ತಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ್ದಾರೆ, ಯುದ್ಧ ಮಾಡಿದ್ದಾರೆ, ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಮಹನೀಯರ ನೆನಪು ಮಾಡಿಕೊಳ್ಳುವುದು ನಮ್ಮ ಕರ್ತವ್ಯ.
ಜೊತೆಗೆ ಅವರ ಕನಸುಗಳನ್ನು ಈಡೇರಿಸಬೇಕಿದೆ. ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವಾರು ಮಹಿಳೆಯರು ದೇಶ ಮಹಿಳೆಯ ಶಕ್ತಿ ಏನು ಎನ್ನುವುದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.