ಮುಸ್ಲಿಂ ಹುಡುಗಿಯರ ಮದುವೆ ವಯಸ್ಸು ಹೆಚ್ಚಿಸುವಂತೆ ಸುಪ್ರೀಂಗೆ ಮನವಿ
ಎಲ್ಲ ಸಮುದಾಯಗಳ ಯುವತಿಯರ ವಿವಾಹ ವಯಸ್ಸನ್ನು ಧರ್ಮಾತೀತವಾಗಿ 18 ವರ್ಷಕ್ಕೆ ನಿಗದಿಪಡಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಮುಸ್ಲಿಂ ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗದ ವಕೀಲ ನಿತಿನ್ ಸಲುಜಾ ಅವರ ಮೂಲಕ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು.