12 ರಾಜ್ಯಗಳಿಗೆ ರಾಜ್ಯಪಾಲರ ನೇಮಕ

ಭಾನುವಾರ, 12 ಫೆಬ್ರವರಿ 2023 (14:52 IST)
ನವದೆಹಲಿ : ವಿವಿಧ ರಾಜ್ಯಗಳಿಗೆ 12 ರಾಜ್ಯಪಾಲರನ್ನು ಹಾಗೂ ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಒಬ್ಬರು ಲೆಫ್ಟಿನೆಂಟ್ ಗವರ್ನರ್ ನೇಮಿಸಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಹಾಗೂ ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ರಾಧಾ ಕೃಷ್ಣನ್ ಮಾಥುರ್ ಅವರು ನೀಡಿರುವ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿರುವುದಾಗಿ ತಿಳಿಸಲಾಗಿದೆ.

ಜಾರ್ಖಂಡ್ನ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಅರುಣಾಚಲಪ್ರದೇಶದ ಗವರ್ನರ್ ಡಾ. ಬಿ.ಡಿ. ಮಿಶ್ರಾ ಅವರನ್ನು ಲಡಾಖ್ ಲೆಫ್ಟಿನೆಂಟ್ ಆಗಿ ನೇಮಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ