ಪಂಜಾಬ್ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ : ಭಗವಂತ್ ಮಾನ್

ಸೋಮವಾರ, 14 ನವೆಂಬರ್ 2022 (08:31 IST)
ಚಂಡೀಗಢ : ಪಂಜಾಬ್ ಸರ್ಕಾರ ರಾಜ್ಯದ ಕುಖ್ಯಾತ ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಿದ್ದು, ಶಸ್ತ್ರಾಸ್ತ್ರ ನಿಯಂತ್ರಣವನ್ನು ಬಿಗಿಗೊಳಿಸಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಸಾರ್ವಜನಿಕ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ನಿಷೇಧಿಸುವುದು ಸೇರಿದಂತೆ ಗನ್ ಮಾಲೀಕತ್ವ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಶಸ್ತ್ರಾಸ್ತ್ರಗಳು ಅಥವಾ ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು ಕೂಡಾ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ ನೀಡಲಾದ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಮುಂದಿನ 3 ತಿಂಗಳೊಳಗೆ ಕೂಲಂಕುಷವಾಗಿ ಪರಿಶೀಲಿಸಲಾಗುವುದು. ಪರವಾನಗಿದಾರರಲ್ಲಿ ಶಸ್ತ್ರಾಸ್ತ್ರ ಹೊಂದಿರಲು ಜಿಲ್ಲಾಧಿಕಾರಿಗಳಿಗೆ ತೃಪ್ತಿದಾಯಕ ಕಾರಣಗಳು ಸಿಗಲಿಲ್ಲವೆಂದಾದರೆ ಹೊಸ ಪರವಾನಗಿಯನ್ನು ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ