ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ತೊಂದರೆಗೆ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.
ಇದಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ 3,500 ಪ್ರವಾಸಿಗರನ್ನು ರಕ್ಷಿಸುವಲ್ಲಿ ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಪಡೆಗಳು ಸಿಕ್ಕಿಂ ಸರ್ಕಾರಕ್ಕೆ ಸಹಾಯ ಮಾಡುತ್ತಿದೆ. ಈಗ ಸದ್ಯದ ಪರಿಸ್ಥಿತಿಯಲ್ಲಿ ಭೂಕುಸಿತದಿಂದಾಗಿ ವ್ಯಾಪಕವಾಗಿ ಹಾನಿಗೀಡಾದ ರಸ್ತೆಗಳು ಹಾಗೂ ಮಳೆ ಕಡಿಮೆ ಆಗುವ ವರೆಗೂ ಜಿಲ್ಲೆಗೆ ಯಾವ ಪ್ರವಾಸಿಗರಿಗೂ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಭಾರೀ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆಗಳನ್ನು ಸರಿ ಪಡಿಸಿದ ನಂತರ ಪ್ರವಾಸಿಗರಿಗೆ ಬರಲು ಅವಕಾಶ ನೀಡುವುದಾಗಿ ಸರ್ಕಾರ ಪ್ರಕಟಿಸಿದೆ.