ಹುಡುಗಿಯರ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ವಂಚಿಸುತ್ತಿದ್ದ ಆರೋಪಿ ಅರೆಸ್ಟ್
ಶುಕ್ರವಾರ, 22 ಫೆಬ್ರವರಿ 2019 (08:51 IST)
ಬೆಂಗಳೂರು : ಯುವಕನೊಬ್ಬ ಹುಡುಗಿಯರ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಅಂದವಾಗಿರುವ ಹುಡುಗಿಯರ ಫೋಟೋ ಹಾಕಿ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ತುಮಕೂರಿನ ಶಿರಾ ಗೇಟ್ ಕೆ.ಹೆಚ್.ಬಿ ಕಾಲೋನಿ ವಾಸಿಯಾಗಿರುವ ಪ್ರಖ್ಯಾತ್ ಎಂಬಾತ ವಿನುತ ಹಾಗೂ ವಿಜೇತ ಎಂಬ ಹುಡುಗಿಯರ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ತಾನು ಬೆಂಗಳೂರಿನ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಎಂದು ಪೋಸ್ಟ್ ಗಳನ್ನು ಹಾಕುತ್ತಿದ್ದ. ಅಷ್ಟೇ ಅಲ್ಲದೇ ಕೆಲವು ಹುಡುಗಿಯರ ಖಾಸಗಿ ಪೋಟೋ ಮತ್ತು ಮಾಹಿತಿ ಪಡೆದು ಲಕ್ಷ ಲಕ್ಷ ರೂ. ಹಣಕ್ಕೆ ಆರೋಪಿ ಬೇಡಿಕೆ ಇಡುತ್ತಿದ್ದನು. ಅಲ್ಲದೆ ಆನ್‍ಲೈನ್ ಮೂಲಕ ಹಣ ಪಡೆದು ಜನರಿಗೆ ವಂಚಿಸುತ್ತಿದ್ದನು.
ಈತನಿಂದ ವಂಚನೆಗೊಳಗಾದವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.