ಸರಕಾರಿ ವಸತಿ ನಿಲಯದಲ್ಲಿರುವ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗೆ ಬಂದ ಅನಾಮಧೇಯ ಪತ್ರ ಘಟನೆಯನ್ನು ಬೆಳಕಿಗೆ ತರುವಲ್ಲಿ ಸಹಕಾರಿಯಾಯಿತು.ಜಿಲ್ಲಾಧಿಕಾರಿಗಳು ಕೂಡಲೇ ಎಪ್‌ಪಿಯವರಿಗೆ ಹಾಸ್ಟೆಲ್ ಮೇಲೆ ದಾಳಿ ನಡೆಸುವಂತೆ ಆದೇಶ ನೀಡಿದರು.
ಸರಕಾರಿ ವಸತಿ ನಿಲಯದ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಲು ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಮಣಿಪುರದಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯನ್ನು ದಾಖಲಿಸಲಾಗಿದ್ದು, ಸಾಕ್ಷ್ಯಾಧಾರಗಳನ್ನು ನಾಶಪಡಿಸಲು ಸಹಕರಿಸಿದ ಹಾಸ್ಟೆಲ್ ವಾರ್ಡನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹಾಸ್ಟೆಲ್ ಮೇಲೆ ದಾಳಿ ನಡೆಸಿದಾಗ ಬಾಲಕಿಯರ ಶೋಷಣೆಯ ಬಗ್ಗೆ ಮಾಹಿತಿ ದೊರೆಯಿತು. ಕೂಡಲೇ ಅಡುಗೆಯವಳಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.