ರೆಸ್ಟುರಾಂಟ್‌ನಲ್ಲಿ ವೇಶ್ಯಾವಾಟಿಕೆ: ಹಲವು ಯುವತಿಯರ ಬಂಧನ

ಗುರುವಾರ, 21 ಡಿಸೆಂಬರ್ 2023 (11:32 IST)
ರೆಸ್ಟುರಾಂಟ್‌ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಬಾಲಕಿಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, 18 ಬಾಲಕರು ಸೆರೆಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಎಸ್‌ಪಿ ನೇತೃತ್ವದಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಲಾಯಿತು ಎಂದು ಎಎಸ್‌ಪಿ  ತಿಳಿಸಿದ್ದಾರೆ.
 
ಮಾಹಿತಿಯ ಮೂಲದ ಜಾಡು ಹಿಡಿದ ಪೊಲೀಸರು ಆರ್ರಾ ಜಿಲ್ಲೆಯಲ್ಲಿರುವ ಹೋಟೆಲ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯರು ಸೇರಿದಂತೆ 30 ಜನರನ್ನು ಬಂಧಿಸಿದ್ದಾರೆ.
 
ಪೊಲೀಸರು ಹೋಟೆಲ್‌ ಮಾಲೀಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸ್ಥಳೀಯರು ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ