ಅರವಿಂದ್ ಕೇಜ್ರಿವಾಲ್ ಎಎಪಿ ಪಕ್ಷಕ್ಕೆ ಖಲಿಸ್ತಾನಿ ಗುಂಪಿನಿಂದ ಹಣಕಾಸಿನ ನೆರವು

Krishnaveni K

ಮಂಗಳವಾರ, 26 ಮಾರ್ಚ್ 2024 (09:31 IST)
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷಕ್ಕೆ ಖಲಿಸ್ತಾನಿ ಗುಂಪಿನಿಂದ ಹಣಕಾಸಿನ ನೆರವು ನೀಡಲಾಗಿತ್ತು ಎಂಬ ವಿಚಾರವೊಂದು ಈಗ ಸುದ್ದಿ ಮಾಡುತ್ತಿದೆ.

ಖಲಿಸ್ತಾನಿ ಭಯೋತ್ಪಾದಕ ಗುರುಪತ್ ವಂತ್ ಸಿಂಗ್ ಪನ್ನುನ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ ನನ್ನು ಬಿಡುಗಡೆ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿಧಿಗೆ ಹಣ ನೀಡಲಾಗಿತ್ತು ಎಂದು ಆರೋಪಿಸಿದ್ದಾನೆ.

ಭುಲ್ಲರ್ 1993 ರ ದೆಹಲಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. 2014 ರಿಂದ 2022 ರವರೆಗಿನ ಅವಧಿಯಲ್ಲಿ ಸುಮಾರು 133.54 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಆತ ಹೇಳಿಕೊಳ್ಳುತ್ತಾನೆ. ಕೇಜ್ರಿವಾಲ್ ಮತ್ತು ಎಎಪಿ ಪಕ್ಷದ ಬಗ್ಗೆ ಈ ರೀತಿಯ ಆರೋಪ ಕೇಳಿಬರುತ್ತಿರುವುದು ಇದೇ ಮೊದಲಲ್ಲ.

ಇದಕ್ಕಿಂತ ಮೊದಲೂ ಪನ್ನುನ್ ಇಂತಹದ್ದೇ ಆರೋಪ ಮಾಡಿದ್ದನು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಬ್ಬರೂ ಅಮೆರಿಕಾ ಮತ್ತು ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಹಣ ಪಡೆದಿದ್ದರು ಎಂದು ಆರೋಪಿಸಿದ್ದನು. ಇದೀಗ ದೆಹಲಿ ಅಬಕಾರಿ ಅಕ್ರಮ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ