ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ "ಜೈ ಪ್ಯಾಲೆಸ್ತೀನ್" ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದ್ದಾರೆ.
ಐದನೇ ಬಾರಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಒವೈಸಿ, ನಂತರ X ನಲ್ಲಿ ಪೋಸ್ಟ್‌ನಲ್ಲಿ ಭಾರತದ ಅಂಚಿನಲ್ಲಿರುವವರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಹೇಳಿದರು.
ವಿವಾದಾತ್ಮಕ ಹೇಳಿಕೆ ಮೂಲಕ ಯಾವಾಗಲೂ ಸುದ್ದಿಯಲ್ಲಿರುವ ಓವೈಸಿ ಇದೀಗ ಮತ್ತೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು 'ಜೈ ಶ್ರೀರಾಮ್' ಘೋಷಣೆ ಕೂಗಲು ಆರಂಭಿಸಿದರು. ಘೋಷಣೆಗಳಿಂದ ವಿಚಲಿತರಾಗದ ಓವೈಸಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು "ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್" ಎಂದು ಹೇಳುವ ಮೂಲಕ ಮುಗಿಸಿದರು.
2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು "ಜೈ ಭೀಮ್, ಅಲ್ಲಾ-ಓ-ಅಕ್ಬರ್ ಮತ್ತು ಜೈ ಹಿಂದ್" ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದರು.
2024 ರ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರನ್ನು ಓವೈಸಿ ಸೋಲಿಸಿದರು.