ಪ್ರಧಾನಿ ಮೋದಿಗೆ ತಾಕತ್ತಿನ ಸವಾಲೆಸೆದ ಅಸಾವುದ್ದೀನ್ ಒವೈಸಿ
ಹೈದರಾಬಾದ್ ಕ್ಷೇತ್ರದ ಹಾಲಿ ಸಂಸದರಾಗಿರುವ ಒವೈಸಿ ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಅಥವಾ ಕಾಂಗ್ರೆಸ್ ನಾಯಕರು ಹೈದರಾಬಾದ್ ನಿಂದ ಕಣಕ್ಕಿಳಿದು ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಮೋದಿ ನೇತೃತ್ವದ ಬಿಜೆಪಿಗೆ, ರಾಹುಲ್ ನೇತೃತ್ವದ ಕಾಂಗ್ರೆಸ್ ಗೆ ಯಾರಿಗೂ ನಮ್ಮನ್ನು ಇಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಸದಾ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರುವ ಒವೈಸಿ ಪ್ರಧಾನಿ ಮೋದಿ ಸುಳ್ಳು ಭರವಸೆಗಳನ್ನಿತ್ತು ಜನರಿಗೆ ಮಂಕುಬೂದಿ ಎರಚಿದ್ದಾರೆ ಎಂದು ಕಿಡಿ ಕಾರಿದ್ದಾರೆ.