ಆರೋಗ್ಯ ಸಚಿವರ ಮೇಲೆ ASI ಗುಂಡಿನ ದಾಳಿ
ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರದ ಗಾಂಧಿ ಚಾಕ್ ಬಳಿ ಆರೋಗ್ಯ ಸಚಿವರ ಮೇಲೆ ಪೊಲೀಸ್ ಅಧಿಕಾರಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಚಿವರ ಎದೆಗೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಆರೋಪಿಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಗೋಪಾಲ್ ದಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಸಚಿವ ನಬಾ ದಾಸ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.