ರಾಹುಲ್ ಗಾಂಧಿ ಮೇಲೆ ಹಲ್ಲೆ : ಡಿ.ಕೆ.ಶಿವಕುಮಾರ್ ಉಗ್ರ ಖಂಡನೆ
ಗುರುವಾರ, 1 ಅಕ್ಟೋಬರ್ 2020 (17:12 IST)
ಕಾಂಗ್ರೆಸ್ ರಾಷ್ಟ್ರೀಯ ಮುಖಂಡ, ಸಂಸದ ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿರೋದಕ್ಕೆ ರಾಜ್ಯ ಕಾಂಗ್ರೆಸ್ ಖಂಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವಿಟ್ ಮಾಡಿದ್ದು, ಕೇಂದ್ರ ಸರಕಾರ, ಉತ್ತರ ಪ್ರದೇಶ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಘಟನೆಯ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ತೆರಳುತ್ತಿದ್ದರು.
ಮಾರ್ಗ ನಡುವೆ ರಾಹುಲ್ ಗಾಂಧಿ ಅವರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಲಾಗಿದೆ.
ಯುಪಿ ಪೊಲೀಸರ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈಗ ಬೇಟಿ ಬಚಾವೋ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.