ಘಟನೆಗೆ ಸಂಬಂಧಿಸಿದಂತೆ ಮೃತರ ಕಿರಿಯ ಪುತ್ರ ಅಬ್ದುಲ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಆಧಾರದ ಮೇಲೆ ಶೇಖ್ ಸೊಸೆ ಮತ್ತು ಆಕೆಯ ಪರಿವಾರದವರ ಮೇಲೆ ಭಾರತೀಯ ದಂಡ ಸಂಹಿತೆಯ ವಿಧಿ 306ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೆ ಯಾರ ಬಂಧನವಾಗಿಲ್ಲ.
ತನ್ನ ತಂದೆಯ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅಬ್ದುಲ್ಲ, ನನ್ನ ಅಣ್ಣ ಪತ್ನಿಗೆ ನೀನು ತಂದೆಯವರನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವೆ ಎಂದು ಎಷ್ಟೋ ಸಲ ಮನವರಿಕೆ ಮಾಡಿಸಲು ಪ್ರಯತ್ನಿಸಿದ್ದರು, ಆದರೆ ಆಕೆ ತಂದೆಯವರಿಗೆ ಕಿರುಕುಳ ನೀಡುವುದನ್ನು ಮುಂದುವರೆಸಿದ್ದಳು. ಇದರಿಂದ ನೊಂದಿದ್ದ ನನ್ನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದಾನೆ.