ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಯ ಕಾಮಗಾರಿಯು 2023ರ ಡಿಸೆಂಬರ್ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಈ ಸಂಬಂಧ ಟ್ರಸ್ಟ್ ಮಾಹಿತಿ ನೀಡಿದೆ.
ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲಾಗುತ್ತಿದೆ.
ಪ್ರಸ್ತಾವಿತ ಮಸೀದಿ, ಆಸ್ಪತ್ರೆ, ಸಮುದಾಯ ಅಡುಗೆ ಕೋಣೆ, ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರದ ನಕ್ಷೆಗೆ ಈ ತಿಂಗಳ ಅಂತ್ಯದೊಳಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಸಿಗಲಿದೆ ಎಂದು ನಾವು ಭಾವಿಸಿದ್ದೇವೆ.
ಶೀಘ್ರದಲ್ಲೇ ನಾವು ಮಸೀದಿಯ ನಿರ್ಮಾಣವನ್ನು ಪ್ರಾರಂಭಿಸುತ್ತೇವೆ ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿ ಅಥರ್ ಹುಸೇನ್ ತಿಳಿಸಿದ್ದಾರೆ.