ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ : ಅಮಿತ್ ಶಾ
ತ್ರಿಪುರಾದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಮಿತ್ ಶಾ, ರಾಹುಲ್ ಬಾಬಾ ಕೇಳಿ, 2024ರ ಜನವರಿ 1 ರಂದು ಬೃಹತ್ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಅಡ್ಡಿಪಡಿಸಿ ಸಮಸ್ಯೆಯನ್ನು ದೀರ್ಘಕಾಲದವರೆಗೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ಇರಿಸಿತ್ತು.
ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಮೋದಿಯವರು ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದರು ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.