ಚುನಾವಣೆಯಿಂದ ದೂರ ಉಳಿದ ಅಜಂ ಖಾನ್ ಕುಟುಂಬ
ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ.
ಸಮಾಜವಾದಿ ಪಕ್ಷವು ಅಜಂ ಖಾನ್ ಅವರ ಪತ್ನಿ ತಂಜೀನ್ ಫಾತಿಮಾ ಅಥವಾ ಅವರ ಸೊಸೆಯನ್ನು ಕಣಕ್ಕಿಳಿಸುತ್ತಿಲ್ಲ. ಬದಲಾಗಿ ಅಸೀಮ್ ರಜಾಗೆ ಟಿಕೆಟ್ ನೀಡಿದೆ. ಅಜಂ ಖಾನ್ ಅಥವಾ ಅವರ ಕುಟುಂಬಸ್ಥರು 1977 ರಿಂದ ಈ ಕ್ಷೇತ್ರದಿಂದ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.