ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಲಿದೆ.
ಈ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ . ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.