ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಇಂದು ಅಂತಿಮ ತೀರ್ಪು ಪ್ರಕಟ
ಬುಧವಾರ, 30 ಸೆಪ್ಟಂಬರ್ 2020 (10:16 IST)
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಲಿದೆ.
1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಉಪಪ್ರಧಾನಿ ಎಲ್.ಕೆ.ಅಡ್ವಾನಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಕ್ತಾಯವಾಗಿದ್ದು, ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು ಇಂದು ತೀರ್ಪನ್ನು ಪ್ರಕಟಿಸಲಿದ್ದಾರೆ. ಆದಕಾರಣ ಇಂದು ಬಿಜೆಪಿ ನಾಯಕರ ಎದೆಯಲ್ಲಿ ಢವಢವ ಶುರುವಾಗಿದೆ ಎನ್ನಲಾಗಿದೆ.