ನವದೆಹಲಿ : ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಸಲಹೆ ನೀಡಿ ವಿವಾದಕ್ಕೀಡಾಗಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಂ ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ.
ಆದ್ರೆ ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ.