ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ?
ಇದೀಗ ಬೋಳುತಲೆ ಪುರುಷರ ಸಂಘವೊಂದು, ಪ್ರತಿ ತಿಂಗಳು 6 ಸಾವಿರ ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿರೋದು ಸುದ್ದಿಯಾಗಿದೆ. ಹೌದು. ತಮಗೆ ತಿಂಗಳಿಗೆ 6 ಸಾವಿರ ಪಿಂಚಣಿ ನೀಡುವಂತೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ತಂಗಲ್ಲಪಲ್ಲಿ ಗ್ರಾಮದ ಬೋಳುತಲೆಯ ಪುರುಷರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ಬೋಳು ತಲೆಯ ಪುರುಷರಿಗೆ ಸಂಕ್ರಾಂತಿ ಉಡುಗೊರೆಯಾಗಿ ಪಿಂಚಣಿ ಘೋಷಿಸಬೇಕು. ಸರ್ಕಾರ ವೃದ್ಧರು, ವಿಧವೆಯರು, ದೈಹಿಕ ವಿಕಲಚೇತನರು ಮತ್ತು ಇತರರಿಗೆ ಪಿಂಚಣಿ ನೀಡುತ್ತಿದೆ. ಅದರಂತೆ ನಮ್ಮ ಮನವಿಯನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಬೋಳುತಲೆ ಪುರುಷರ ಸಂಘ ತೆಲಂಗಾಣ ಸರ್ಕಾರಕ್ಕೆ ಆಗ್ರಹಿಸಿದೆ.