ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ನಿಷೇಧ ..!

ಶುಕ್ರವಾರ, 19 ಮೇ 2023 (08:33 IST)
ನವದೆಹಲಿ : ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿರುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು ಈ ಆದೇಶ ನೀಡಿದೆ. ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ತಮಿಳುನಾಡು ರಾಜ್ಯಕ್ಕೆ ಸೂಚಿಸಿದೆ.

ವಿಚಾರಣೆ ನಡೆಸುವಾಗ ಪ್ರತಿ ಚಿತ್ರಮಂದಿರಕ್ಕೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಅಲ್ಲದೆ ಚಲನಚಿತ್ರ ನೋಡುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಾದ ವ್ಯವಸ್ಥೆಯನ್ನು ಮಾಡಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ