ಅಂಚೆ ಖಾತೆಗೆ ಬ್ಯಾಂಕ್ ಖಾತೆ ಕಡ್ಡಾಯ
ಏ.1ರಿಂದ ಅಂಚೆ ಕಚೇರಿಯ ಸಣ್ಣ ಉಳಿತಾಯ ಖಾತೆ ನಿಯಮಗಳು ಬದಲಾಗಲಿವೆ.
ಹೊಸ ನಿಯಮಗಳ ಪ್ರಕಾರ, ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಉಳಿತಾಯ ಖಾತೆ ಅಥವಾ ಬ್ಯಾಂಕ್ ಖಾತೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.
ಏಕೆಂದರೆ, ಈ ಸಣ್ಣ ಉಳಿತಾಯ ಖಾತೆಗಳಿಂದ ಬರುವ ಬಡ್ಡಿದರವನ್ನು ಉಳಿತಾಯ ಖಾತೆಗೆ ಇನ್ಮುಂದೆ ನೇರವಾಗಿ ಜಮೆ ಮಾಡಲಾಗುತ್ತದೆ.
ಈಗಾಗಲೇ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ನಲ್ಲಿ ಖಾತೆಯನ್ನು ಹೊಂದಿದ್ದರೆ, ಅದನ್ನು ಪೋಸ್ಟ್ ಆಫೀಸ್ನ ಸಣ್ಣ ಉಳಿತಾಯ ಖಾತೆಗೆ ಲಿಂಕ್ ಮಾಡಬಹುದು.