ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಸರ್ಕಾರಿ ಸ್ವಾಮ್ಯದ ಬಹುತೇಕ ಬ್ಯಾಂಕ್‌ಗಳಿಂದು ಕಾರ್ಯ ನಿರ್ವಹಿಸುವುದಿಲ್ಲ.
ಈ ಬಾರಿ ಗ್ರಾಮೀಣ ಬ್ಯಾಂಕ್‌ಗಳು ಮತ್ತು ಕೆಲವು ಸಹಕಾರಿ ಬ್ಯಾಂಕ್‌ಗಳೂ ಸಹ ಮುಷ್ಕರಕ್ಕೆ ಬೆಂಬಲ ನೀಡಿವೆ. ದೇಶದಾದ್ಯಂತ 10 ಲಕ್ಷಕ್ಕೂ ಹೆಚ್ಚಿನ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆದರೆ ಐಸಿಸಿಐ, ಆಕ್ಸಿಸ್, ಎಚ್ ಡಿಎಫ್ ಸಿ, ಕೋಟಕ್ ಮಹೇಂದ್ರದಂತಹ ಖಾಸಗಿ ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಸರ್ಕಾರಿ ಸ್ವಾಮ್ಯದ ಬಹುತೇಕ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಆದರೆ, ಎಟಿಎಂ ಮತ್ತು ಆನ್‌ಲೈನ್ ಬ್ಯಾಂಕಿಂಗ್‌ಗೆ ಯಾವುದೇ ಸಮಸ್ಯೆ ಇಲ್ಲ.