ರಾಷ್ಟ್ರಪಿತ ಮಹಾತ್ಮಾ ಗಾಂಧಿಗೆ ನಮನ ಸಲ್ಲಿಸಿದ ಬರಾಕ್ ಒಬಾಮಾ

ಭಾನುವಾರ, 25 ಜನವರಿ 2015 (14:00 IST)
ಭಾರತಕ್ಕೆ ಭೇಟಿನೀಡಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ.
 
ಇಂದು ಬೆಳಿಗ್ಗೆ ಭಾರತಕ್ಕೆ ಬಂದಿಳಿದ ಒಬಾಮಾ ಮತ್ತು ಅವರ ಪತ್ನಿ ಮಿಶಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಹೊರಟ ಒಬಾಮಾ ಹೋಟೆಲ್ ಮೌರ್ಯ ಶೆರಟಾನ್‌ನಲ್ಲಿ ಕೆಲ ಗಂಟೆಗಳ ಕಾಲ ತಂಗಿದ್ದರು.
 
ನಂತರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ಒಬಾಮ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲಿಂದ ರಾಜ್‌ಘಾಟ್‌ಗೆ ತೆರಳಿದ ಬರಾಕ್ ಒಬಾಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
 
ದೆಹಲಿಯ ಹೈದ್ರಾಬಾದ್ ಹೌಸ್‌ಗೆ ಒಬಾಮಾ ತೆರಳಿದ್ದು. ಭೋಜನಕೂಟದ ಬಳಿಕ ಉಭಯ ದೇಶದ ನಾಯಕರು ಮಾತುಕತೆ ನಡೆಸಲಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಒಬಾಮಾ ಭೇಟಿ ನೀಡಿದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, 500 ಕಿ.ಮೀ ವ್ಯಾಪ್ತಿಯಲ್ಲಿ ವಿಮಾನ ಹಾರಾಟ ಬಂದ್ ಮಾಡಲಾಗಿದೆ.
 
ದೆಹಲಿಯ ಕೆಲ ನಿರ್ದಿಷ್ಟ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನೀಯೋಜಿಸಲಾಗಿದ್ದು, ಭದ್ರತೆಗಾಗಿ ಒಟ್ಟು 60 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
 

ವೆಬ್ದುನಿಯಾವನ್ನು ಓದಿ