ರೆಬೆಲ್ ಲೀಡರ್ ಬಸನಗೌಡ ಪಾಟೀಲ್ ಯತ್ನಾಳ್ ರಿಂದ ಇಂದು ಹೈಕಮಾಂಡ್ ನಾಯಕರ ಭೇಟಿ

Krishnaveni K

ಬುಧವಾರ, 4 ಡಿಸೆಂಬರ್ 2024 (09:18 IST)
ನವದೆಹಲಿ: ರಾಜ್ಯ ಬಿಜೆಪಿಯ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಂಡ್ ಟೀಂ ಇಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗ ಟೀಕಾ ಪ್ರಹಾರ ನಡೆಸುತ್ತಿರುವ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಈ ಸಂಬಂಧ ದೆಹಲಿಗೆ ತೆರಳಿರುವ ಯತ್ನಾಳ್ ತಮ್ಮ ಜೊತೆಗೆ ಬೆಂಬಲಿಗ ನಾಯಕರನ್ನೂ ಕರೆದೊಯ್ದಿದ್ದಾರೆ.

ಎಲ್ಲರೂ ಇಂದು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತಾರಾ ಅಥವಾ ಕೇವಲ ಯತ್ನಾಳ್ ಮಾತ್ರ ಭೇಟಿಯಾಗುತ್ತಾರಾ ಎನ್ನುವುದು ಖಚಿತವಾಗಿಲ್ಲ. ಆದರೆ ಇಂದು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ವಿಜಯೇಂದ್ರ ಬಣದ ವಿರುದ್ಧ ತಮ್ಮ ಆರೋಪಗಳ ಪಟ್ಟಿಯನ್ನು ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೊರತುಪಡಿಸಿ ಉಳಿದೆಲ್ಲಾ ಬಿಜೆಪಿ ನಾಯಕರ ಭೇಟಿಗೆ ಯತ್ನಾಳ್ ಸಮಯ ಕೇಳಿದ್ದಾರೆ. ಈ ನಡುವೆ ಯಾವೆಲ್ಲಾ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನುವುದು ಖಚಿತವಾಗಿಲ್ಲ. ಕಾಂಗ್ರೆಸ್ ನಾಯಕರೊಂದಿಗೆ ವಿಜಯೇಂದ್ರ ಮಾಡಿಕೊಂಡಿರುವ ಮ್ಯಾಚ್ ಫಿಕ್ಸಿಂಗ್ ತಡೆದರೆ ಕರ್ನಾಟಕದಲ್ಲಿ ಬಿಜೆಪಿಗೆ ಭವಿಷ್ಯವಿದೆ ಎಂದು ಮನವರಿಕೆ ಮಾಡಿಕೊಡುವುದಾಗಿ ಯತ್ನಾಳ್ ಬಣದ ಸದಸ್ಯರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ