ಬೆಂಗಳೂರಿನಂತೆ ದೆಹಲಿಯಲ್ಲೂ ಯುವತಿಗೆ ಲೈಂಗಿಕ ಕಿರುಕುಳದ ಕೇಸ್

ಗುರುವಾರ, 5 ಜನವರಿ 2017 (16:40 IST)
ಬೆಂಗಳೂರಿನ ಯುವತಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಮಾಸುವ ಮುನ್ನವೇ ದೆಹಲಿಯಲ್ಲೂ ಇಂತಹದ ಘಟನೆ ನಡೆದಿರುವುದು ಮಹಿಳೆಯರ ಸುರಕ್ಷತೆ ಕುರಿತಂತೆ ಆಘಾತ ಮೂಡಿಸಿದೆ.
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದ ಗುಂಪನ್ನು ತಡೆಯಲು ಹೋದ ಪೊಲೀಸರ ಮೇಲೆ ಯುವಕರು ದಾಳಿ ನಡೆಸಿದ ಹೇಯ ಘಟನೆ ಮುಖರ್ಜಿ ನಗರದಲ್ಲಿ ವರದಿಯಾಗಿದೆ.
 
ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ಕೆಳಗೆ ಬೀಳಿಸಿದ ಕಾಮುಕರ ಗುಂಪು, ನಂತರ ಆಕೆಗೆ ಲೈಂಗಿಕ ಕಿರುಕುಳ ನೀಡಿದೆ. ಇದನ್ನು ತಡೆಯಲು ಹೋದ ಪೊಲೀಸರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದರಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
 
ಘಟನೆಯು ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಯುವತಿ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾಳೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪ್ರಾಥಮಿಕ ತನಿಖೆ ಪ್ರಕಾರ ಆರೋಪಿಗಳು ವಿದ್ಯಾರ್ಥಿಗಳಾಗಿದ್ದು ಪ್ರವೇಶ ಪರೀಕ್ಷೆಗೆ ಸಿದ್ದತೆ ನಡೆಸಿದ್ದಾರೆ, ಹತ್ತಿರದ ಪಿಜಿಗಳಲ್ಲಿ ವಾಸವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ