ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್
ಭಗವಂತ್ ಮಾನ್ ಡಾ.ಗುರುಪ್ರೀತ್ ಕೌರ್ ಅವರನ್ನು ವರಿಸಲಿದ್ದು, ಚಂಡೀಗಢದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಸರಳವಾಗಿ ನಡೆಯುವ ಸಮಾರಂಭದಲ್ಲಿ ಕುಟುಂಬಸ್ಥರು, ಹತ್ತಿರದ ಸಂಬಂಧಿಗಳು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಮಾನ್ ಅವರೂ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
48 ವರ್ಷ ವಯಸ್ಸಿನ ಮಾನ್ ಅವರು 2ನೇ ಬಾರಿಗೆ ಮದುವೆಯಾಗುತ್ತಿದ್ದಾರೆ. ತಮ್ಮ ಮೊದಲ ಪತ್ನಿ ಇಂದರ್ಪ್ರೀತ್ ಕೌರ್ನಿಂದ ವಿಚ್ಛೇದನ ಪಡೆದಿದ್ದಾರೆ. ಮಾನ್ ಅವರಿಗೆ ಇಬ್ಬರು ಮಕ್ಕಳಿದ್ದು, ಮೊದಲ ಪತ್ನಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ.