ಭವಾನಿಪುರ ಉಪ ಚುನಾವಣೆ ಮತ ಎಣಿಕೆ; ಮಮತಾ ಬ್ಯಾನರ್ಜಿ ಮುನ್ನಡೆ

ಭಾನುವಾರ, 3 ಅಕ್ಟೋಬರ್ 2021 (12:06 IST)
ಕೋಲ್ಕತ್ತಾ, ಅ 03 :  ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆ ಮಾಡಿರುವ ಉಪ ಚುನಾವಣೆ ಇದಾಗಿದೆ.

881 ಮತಗಳು; ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ 3680 ಮತಗಳ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ 881 ಮತ ಪಡೆದಿದ್ದಾರೆ.
ಮಮತಾ ಮುನ್ನಡೆ ಕೇಂದ್ರ ಚುನಾವಣಾ ಆಯೋಗ 10.30ಕ್ಕೆ ನೀಡಿದ ಮಾಹಿತಿಯಂತೆ 2 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ವಿರುದ್ಧ 2,377 ಮತಗಳ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ
ಭಾನುವಾರ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಒಟ್ಟು 21 ರೌಂಡ್ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆದ್ದು ಸರ್ಕಾರ ರಚನೆ ಮಾಡಿದೆ.
ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಆದ್ದರಿಂದ ಭವಾನಿಪುರ ಕ್ಷೇತ್ರದಲ್ಲಿ ಅವರು ಉಪ ಚುನಾವಣೆ ಕಣಕ್ಕಿಳಿದಿದ್ದಾರೆ.
ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಅಭ್ಯರ್ಥಿಗಳು. ಕಾಂಗ್ರೆಸ್ ಪಕ್ಷ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸೆಪ್ಟೆಂಬರ್ 30ರಂದು ಉಪ ಚುನಾವಣೆ ಮತದಾನ ನಡೆದಿತ್ತು.
ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಹಿಂದಿನ ಚುನಾವಣೆಯಲ್ಲಿ ಭವಾನಿಪುರದಲ್ಲಿ ಗೆದ್ದಿದ್ದ ಸೋವನ್ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಮಮತಾ ಬ್ಯಾನರ್ಜಿ ನಡುವೆ ಪ್ರಬಲ ಪೈಪೋಟಿ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ