ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ಹಣ ವಂಚನೆ: ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಗೋಪಾಲ್ ಜೋಶಿ ವಿರುದ್ಧ ದೂರು ದಾಖಲಾಗಿತ್ತು.
ಇದರ ಅನ್ವಯ ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.