ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು ಆ ಮೂಲಕ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕೂಡ ಗಣನೀಯವಾಗಿ ಇಳಿಕೆಯಾಗುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿಸುಂಕವನ್ನುಲೀಟರ್ ಗೆ 3 ರೂ ನಷ್ಟು ಏರಿಕೆ ಮಾಡಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 2 ರೂ ನಿಂದ 8 ರೂಪಾಯಿ ಏರಿಕೆ ಆಗಿದ್ದರೆ, ಡಿಸೇಲ್ ಮೇಲಿನ ಸುಂಕ 4 ರೂ ಗೆ ಏರಿಕೆ ಮಾಡಲಾಗಿದೆ ಎನ್ನಲಾಗಿದೆ.