ಬಿಹಾರ್ ಮೊದಲ ಹಂತದ ಚುನಾವಣೆಯಲ್ಲಿ ಶೇ.57 ರಷ್ಟು ಮತದಾನ

ಸೋಮವಾರ, 12 ಅಕ್ಟೋಬರ್ 2015 (18:59 IST)
ಬಿಹಾರ್‌ನ 10 ಜಿಲ್ಲೆಗಳ 49 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ 57 ರಷ್ಟು ಮತದಾನವಾಗಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.
 
ಇಂದು ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಶೇ.50.85 ರಷ್ಟು ಮತದಾನವಾಗಿತ್ತು ಎಂದು ಚುನಾವಣೆ ಆಯೋಗದ ಬುಲೆಟಿನ್ ಪ್ರಕಟಿಸಿದೆ.
 
ಮತದಾನ ಆರಂಭವಾದ ಎರಡು ಗಂಟೆಗಳ ಅವಧಿಯಲ್ಲಿ ಶೇ.20 ರಷ್ಟು ಮತದಾನವಾಗಿತ್ತು. ನಕ್ಸಲ್ ಪೀಡಿತ ಪ್ರದೇಶವಾದ ಜಮುವೈ ಜಿಲ್ಲೆಯಲ್ಲಿ ಮಧ್ಯಾಹ್ನದ ವೇಳೆಗೆ ಶೇ.40.77 ರಷ್ಟು ಮತದಾನವಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ದ್ರೋಣ್‌ಗಳನ್ನು ಬಳಸಲಾಗಿದೆ. 13,212 ಮತದಾನ ಕೇಂದ್ರಗಳ ಭದ್ರತೆಗಾಗಿ 87,600 ಕೇಂದ್ರ ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ ಒಟ್ಟು 1.20 ಲಕ್ಷ ಭದ್ರತಾ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು ಎಂದು ಕೇಂದ್ರ ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ