ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ಮನೆಗೆ ಉಚಿತ ವಿದ್ಯುತ್ ಘೋಷಿಸಿದ ಬಿಹಾರ ಸಿಎಂ ನಿತೀಶ್
ಈ ಘೋಷಣೆಗೆ ಮುನ್ನ ಮಂಗಳವಾರ ನಿತೀಶ್ ಕುಮಾರ್ 30 ಪ್ರಮುಖ ಪ್ರಸ್ತಾಪಗಳಿಗೆ ಅನುಮೋದನೆ ನೀಡಿದ್ದರು, ಇದರಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಯುವಕರಿಗೆ ಉದ್ಯೋಗ ಒದಗಿಸುವ ಯೋಜನೆಯೂ ಸೇರಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಪ್ರಮುಖ ನಿರ್ಧಾರಗಳನ್ನು ಆಢಳಿತರೂಢ ಎನ್‌ಡಿಎ ತೆಗೆದುಕೊಳ್ಳುತ್ತಿದೆ.