ಪ್ರಧಾನಿ ಮೋದಿಯವರ ‘ಆಯುಷ್ಮಾನ್ ಭಾರತ್’ ಯೋಜನೆಯನ್ನು ಮೆಚ್ಚಿದ ಬಿಲ್ ಗೇಟ್ಸ್

ಶುಕ್ರವಾರ, 18 ಜನವರಿ 2019 (08:41 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು 2018 ಸೆ. 23 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನದ ಅಂಗವಾಗಿ ಜಾರಿಗೆ ತಂದ ‘ಆಯುಷ್ಮಾನ್ ಭಾರತ್’ ಯೋಜನೆ 100 ದಿನಗಳನ್ನು ಪೂರೈಸಿದ್ದು ಇದಕ್ಕೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಜೆಪಿ ನಡ್ಡಾ,’ಯೋಜನೆ ಜಾರಿಯಾಗಿ 100 ದಿನಗಳನ್ನು ಪೂರೈಸಿದ್ದು, ಇದುವರೆಗೂ 6,85,000 ಮಂದಿಗೆ ಇದರ ಸೌಲಭ್ಯ ತಲುಪಿದೆ’ ಎಂದು ಟ್ವೀಟ್ ಮಾಡಿದ್ದರು.


ಈ ಟ್ವೀಟ್ ಗೆ ರೀಟ್ವೀಟ್ ಮಾಡಿದ ಬಿಲ್ ಗೇಟ್ಸ್, ಆಯುಷ್ಮಾನ್ ಭಾರತ್ ಯೋಜನೆ ಕೇವಲ 100 ದಿನಗಳಲ್ಲಿ ಇಷ್ಟು ಮಂದಿಯನ್ನು ತಲುಪಿರುವುದು ಸಂತಸ ತಂದಿದೆ. ಭಾರತ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿಗಳ ಟ್ವಿಟ್ಟರ್ ಖಾತೆ ಹಾಗೂ ಸಚಿವಾಲಯದ ಆಯುಷ್ಮಾನ್ ಭಾರತ್ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.


ಬಿಲ್ ಗೇಟ್ಸ್ ಮಾತ್ರವಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕರು ಕೂಡ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಜನರು ಆರೋಗ್ಯ ಸೇವೆಯನ್ನು ಪಡೆಯಲು ಯೋಜನೆ ಸಹಕಾರಿ ಆಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರಿಗೆ ಅಭಿನಂಧನೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ