ರಾಜ್ಯಸಭೆಯಲ್ಲಿ ಮಸೂದೆ ಮಂಡನೆ?

ಗುರುವಾರ, 10 ಆಗಸ್ಟ್ 2023 (13:33 IST)
ನವದೆಹಲಿ : ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುವ ಪ್ರಕ್ರಿಯೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡುವ ಸಂಬಂಧ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿದೆ.
 
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರ ಅವಧಿ) ಮಸೂದೆ 2023 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದರು.

ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಬೇಕು. ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೇ ಇದ್ದರೆ ಅತಿ ದೊಡ್ಡ ಪಕ್ಷದ ನಾಯಕ  ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಇದರ ಸದಸ್ಯರಾಗಿರುತ್ತಾರೆ.

ಪ್ರಧಾನ ಮಂತ್ರಿ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಚುನಾವಣಾ ಆಯುಕ್ತರಾಗುವ ಅಧಿಕಾರಿ ಭಾರತ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಹುದ್ದೆಯನ್ನು ಹೊಂದಿರಬೇಕು ಎಂಬ ಅಂಶ ಮಸೂದೆಯಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ