ಬಿಪಿನ್ ರಾವತ್ ದುರ್ಮರಣ!

ಬುಧವಾರ, 8 ಡಿಸೆಂಬರ್ 2021 (17:45 IST)
ಚೆನ್ನೈ : ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.

ಈ ಸಂಬಂಧ ವಾಯುಸೇನೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ ಮೃತಪಟ್ಟ ವಿಚಾರವನ್ನು ತಿಳಿಸಿದೆ. ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕೊಯಮತ್ತೂರು, ಕೂನೂರು ನಡುವಿನ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ದೊಡ್ಡ ಸ್ಫೋಟದ ಶಬ್ಧದೊಂದಿಗೆ ಹೆಲಿಕಾಪ್ಟರ್ ಪತನವಾಗಿದೆ.
ದುರಂತಕ್ಕೀಡಾದ ಹೆಲಿಕಾಪ್ಟರ್ನಲ್ಲಿ ಬಿಪಿನ್ ರಾವತ್ ಸೇರಿ 14 ಮಂದಿ ಪಯಣಿಸುತ್ತಿದ್ದರು. ಈ ದುರಂತದಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ 11 ಮಂದಿ ಬಲಿ ಆಗಿದ್ದಾರೆ. ಬಿಪಿನ್ ರಾವತ್ ಅವರು ಬಾರದ ಲೋಕಕ್ಕೆ ಪ್ರಯಾಣ ಬೆಳಸಿದ್ದಾರೆ.
2015ರಲ್ಲಿ ಸಂಭವಿಸಿದ ನಾಗಾಲ್ಯಾಂಡ್ನ ದೀಮಾಪುರ್ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸ್ವಲ್ಪದ್ರಲ್ಲೇ ಪ್ರಾಣಾಪಾಯದಿಂದ ಬಿಪಿನ್ ರಾವತ್ ಪಾರಾಗಿದ್ದರು. ಆಗ ಬಿಪಿನ್ ರಾವತ್ ಲೆಫ್ಟಿನೆಂಟ್ ಜನರಲ್ ಆಗಿದ್ದರು. ದಿಮಾಪುರದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು.
ಎಂಜಿನ್ ವೈಫಲ್ಯದಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೈಲಟ್ಗಳು ಮತ್ತು ಕರ್ನಲ್ ಕೂಡ ಬದುಕುಳಿದಿದ್ದರು. ಆದರೆ ಇವತ್ತು ಸಂಭವಿಸಿದ ದುರಂತದಲ್ಲಿ ಬಿಪಿನ್ ರಾವತ್ ಸಾವನ್ನಪ್ಪಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ