ಹೊಸ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್

ಶನಿವಾರ, 31 ಡಿಸೆಂಬರ್ 2016 (16:03 IST)
ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಭಾರತೀಯ ಸೇನೆಯ 27ನೇ ಮುಖ್ಯಸ್ಥರಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು. ಕಳೆದ 43 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೆಫ್ಟಿನೆಂಟ್ ಜನರಲ್ ದಲ್ಬೀರ್ ಸಿಂಗ್ ಅವರು ಇಂದು ನಿವೃತ್ತಿಗೊಂಡಿದ್ದು ಅವರ ಸ್ಥಾನದಲ್ಲಿ ಬಿಪಿನ್ ಆಸೀನರಾಗಿದ್ದಾರೆ. ಅವರು 1.3 ದಶಲಕ್ಷ ಸೇನಾ ಪಡೆಯನ್ನು ಮುನ್ನಡೆಸಲಿದ್ದಾರೆ. 
ಇದೇ ಸಂದರ್ಭದಲ್ಲಿ ಏರ್ ಚೀಫ್ ಮಾರ್ಷಲ್ ಬಿ.ಎಸ್. ಧನೋವಾ ಕೂಡ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದರು. 
 
ತಮ್ಮ ಸೇವೆಗೆ ವಿದಾಯ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ದಲ್ಬೀರ್ ಸಿಂಗ್,  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಜತೆಗೆ ಸೈನ್ಯ ನಡೆಸಿದ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ಕಲ್ಪಿಸಿದ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನರ್ಪಿಸಿದರು. 
 
ಪ್ರಸಕ್ತ ವರ್ಷದಲ್ಲಿಯೇ ಸೇನೆಯ ಉಪಮುಖ್ಯಸ್ಥರಾಗಿ ನೇಮಕವಾಗಿದ್ದ ರಾವತ್,  ಭಯೋತ್ಪಾದನಾ ನಿಗ್ರಹ ತಜ್ಞರಾಗಿದ್ದು ಗೆರಿಲ್ಲಾ ಯುದ್ಧ ತಂತ್ರದಲ್ಲೂ ಸಿದ್ಧಹಸ್ತರು. ಸೇನೆಯ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಅವರದು.
 
ಧನೋವಾ ಅವರೂ ಕೂಡ ವಾಯುಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಗಿಲ್ ಯುದ್ಧ ಸೇರಿದಂತೆ ಬಹುತೇಕ ಕಾರ್ಯಚರಣೆಯನ್ನು ಮುನ್ನಡೆಸಿರುವ ಅನುಭವ ಧನೋವಾ ಅವರಿಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ವೆಬ್ದುನಿಯಾವನ್ನು ಓದಿ