ಗುಜರಾತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದಿಬೆನ್ ಪಟೇಲ್

ಸೋಮವಾರ, 1 ಆಗಸ್ಟ್ 2016 (19:16 IST)
ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ
 
ಬಿಜೆಪಿ ಪಕ್ಷದ ನಿಯಮದಂತೆ 75 ವರ್ಷ ತುಂಬಿದ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ ಸಿದ್ಧಾಂತದಂತೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಸಾಮಾಜಿಕ ಅಂತರ್ಜಾಲ ತಾಣವಾದ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯ ಘಠಕದ ಅಧ್ಯಕ್ಷ ವಿಜಯ್ ರೂಪಾನಿಯವರಿಗೆ ಸಲ್ಲಿಸಿದ್ದು, ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಗುಜರಾತ್‌ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆನಂದಿ ಬೆನ್ ಪಟೇಲ್ ಅಧಿಕಾರ ವಹಿಸಿಕೊಂಡಿದ್ದರು. 75 ವರ್ಷಗಳು ತುಂಬಿದ್ದರಿಂದ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಬಿಡುಗಡೆ ನೀಡಿ, ಹೊಸಬರಿಗೆ ಅವಕಾಶ ಕಲ್ಪಿಸಿ ಎಂದು ಪಟೇಲ್ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದರು. 
 
ವೈಬ್ರೆಂಟ್ ಗುಜರಾತ್ ಮೀಟ್ ಮತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ನೂತನ ಮುಖ್ಯಮಂತ್ರಿಗೆ ಕಾಲಾವಕಾಶ ದೊರೆಯಬೇಕು ಎನ್ನುವ ಕಾರಣದಿಂದಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ರಾಜೀನಾಮೆ ವಿಪಕ್ಷಗಳಿಗೆ ಸರಕಾರದ ವಿರುದ್ಧ ಬಳಸಲು ಹೊಸತೊಂದು ಅಸ್ತ್ರ ದೊರೆತಂತಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ