ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಮಾರಾಮಾರಿ; ನಾಲ್ವರು ಬಿಜೆಪಿ ಕಾರ್ಯಕರ್ತರು ಬಲಿ

ಭಾನುವಾರ, 9 ಜೂನ್ 2019 (11:12 IST)
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.






ಬಿಜೆಪಿ ವಿಜಯೋತ್ಸವದ ವೇಳೆ ಪಕ್ಷದ ಧ್ವಜಗಳನ್ನು ಕಟ್ಟುವ ವಿಚಾರಕ್ಕೆ ಪಶ್ಚಿಮ ಬಂಗಾಳದ ಬಸಿರ್ಹಾತ್ ಸಂದೇಶ್ ಖಾಲಿ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಆ ವೇಳೆ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಈ ಘಟನೆಯಲ್ಲಿ  ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಬಿಜೆಪಿ ನಾಯಕ ಮುಕುಲ್ ರಾಯ್ ಮಾಹಿತಿ ನೀಡಿದ್ದು, ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಉಗ್ರವಾದ ಬೆಳೆಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ