ಲಾಲು ಪ್ರಸಾದ್ ಯಾದವ್ ರಕ್ಷಣೆಗೆ ನಿಂತ ಬಿಹಾರ್ ಸಿಎಂ ನಿತೀಶ್ ಕುಮಾರ್: ಬಿಜೆಪಿ

ಗುರುವಾರ, 9 ಜೂನ್ 2016 (20:12 IST)
ಮೇವು ಹಗರಣದ ದಾಖಲೆಗಳು ಕಾಣೆಯಾಗಿವೆ ಎನ್ನುವ ಸುದ್ದಿ ಬಿತ್ತರವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಬಿಜೆಪಿ ವಕ್ತಾರ ರಾಜೀವ್ ಪ್ರತಾಪ್ ರೂಢಿ, ಬಹುಕೋಟಿ ಹಗರಣದ ರೂವಾರಿಯಾದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಲಾಲು ಯಾದವ್‌ ಭಾಗಿಯಾಗಿದ್ದಾರೆನ್ನಲಾದ ಮೇವು ಹಗರಣದ ದಾಖಲೆಗಳನ್ನು ನಾಶಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಬಿಹಾರ್ ರಾಜ್ಯದಲ್ಲಿ ಜೆಡಿಯು ಮತ್ತು ಆರ್‌ಜೆಡಿ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅಪರಾಧ ಮತ್ತು ಅಪರಾಧಿಗಳಿಗೆ ಸರಕಾರ ರಕ್ಷಣೆ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. 
 
ಮಹಾಮೈತ್ರಿ ಕೂಟ ಅಧಿಕಾರಕ್ಕೆ ಬಂದ ನಂತರ ಅಪರಾಧ ಸಂಖ್ಯೆಗಳಲ್ಲಿ ಹೆಚ್ಚಳವಾಗಿದೆ. ಕಳೆದ ಜನೆವರಿ- ಮಾರ್ಚ್ ತಿಂಗಳವರೆಗೆ 46 ಸಾವಿರ ಪ್ರಕರಣಗಳು ದಾಖಲಾಗಿವೆ. ಇದು ಬಿಜೆಪಿ ಹೇಳುತ್ತಿಲ್ಲ. ಬಿಹಾರ್ ಸರಕಾರದ ಅಂಕಿ ಅಂಶಗಳಾಗಿವೆ ಎಂದರು.
 
ಬಿಜೆಪಿ ಆರೋಪಗಳಿಗೆ ಪ್ರತಿಕ್ರಿ.ಯೆ ನೀಡಿದ ಬಿಹಾರ್ ಸರಕಾರ, ಮೇವು ಹಗರಣದ ದಾಖಲೆಗಳು ಕಾಣೆಯಾಗಿರುವ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಮುಕ್ತವಾಗಿ ತಿರುಗಾಡಲು ಬಿಡುವುದಿಲ್ಲ ಎಂದು ಬಿಹಾರ್ ಸರಕಾರ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ