ರಾಜ್ಯಪಾಲರ, ಗವರ್ನರ್ ಮೂಲಕ ಬಿಜೆಪಿ ಆಡಳಿತ- ಕೇಜ್ರಿವಾಲ್
ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು ದೆಹಲಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರವನ್ನು ಧಿಕ್ಕರಿಸಿ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಗವರ್ನರ್ ಗಳು ಚುನಾಯಿತ ಸರ್ಕಾರಗಳನ್ನು ಧಿಕ್ಕರಿಸಿ ಅಧಿಕಾರಿಗಳ ಸಭೆ ಕರೆದು ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹಲವು ಬಾರಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು ಮತ್ತು ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಹೇಳಿರುವುದನ್ನು ಸ್ಮರಿಸಬಹುದು.