ದೇಶದಲ್ಲಿ ದುರ್ಬಲ ಸ್ಥಿತಿಯಲ್ಲಿರುವ ಬಿಜೆಪಿ 200 ಗಡಿ ದಾಟಲ್ಲ: ಮಲ್ಲಿಕಾರ್ಜುನ ಖರ್ಗೆ

sampriya

ಮಂಗಳವಾರ, 28 ಮೇ 2024 (18:24 IST)
Photo By X
ಚಂಡೀಗಢ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200ರ ಗಡಿ ದಾಟುವುದಿಲ್ಲ, ಇನ್ನೂ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂಬುದು ಬಕ್ವಾಸ್‌ ವಾದ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅವರು ಇಂದು ಅಮೃತಸರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿ, ಈ ಬಾರಿ ಕಳೆದ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿಕೊಂಡರು ಬಿಜೆಪಿ ಗೆಲುವಿನ ಸೀಟುಗಳ ಸಂಖ್ಯೆ ಇಳಿಕೆಯಾಗಲಿದೆ ಎಂದು ಭವಿಷ್ಯ ನುಡಿದರು.

ಸದ್ಯ ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಲಿಲ್ಲ. ಅದಲ್ಲದೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ದುರ್ಬಲ ಸ್ಥಿತಿಯಲ್ಲಿದೆ. ಇನ್ನೂ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಅಲ್ಪ ಮಟ್ಟಿನ ಸ್ಪರ್ಧೆಯಿದೆ. ಈ ಪರಿಸ್ಥಿತಿಯಲ್ಲಿ ಬಿಜೆಪಿ ಹೇಗೆ 400ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯ ಎಂದು ಪ್ರಶ್ನಿಸಿದರು.

ಇನ್ನೂ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಂತೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖಾಲಿಯಿರುವ 30 ಲಕ್ಷ ಸರ್ಕಾರಿ ಉದ್ಯೋಗವನ್ನು ಭರ್ತಿ ಮಾಡಲಾಗುವುದು ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.a

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ