ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿಗೆ ಅಧಿಕಾರ

ಮಂಗಳವಾರ, 28 ಫೆಬ್ರವರಿ 2023 (06:58 IST)
ನವದೆಹಲಿ : ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಘಾಲಯದಲ್ಲಿ ಮೂರನೇ ಸ್ಥಾನ ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.
 
ನಾಗಾಲ್ಯಾಂಡ್, ಮೇಘಾಲಯಗಳಲ್ಲಿ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಸಮೀಕ್ಷೆಗಳ ಪೈಕಿ ಎರಡು ಸಮೀಕ್ಷೆಗಳು ಬಿಜೆಪಿಗೆ ಪೂರ್ಣ ಬಹುಮತ ಬರಲಿದೆ ಎಂದು ತಿಳಿಸಿದರೆ ಒಂದು ಸಮೀಕ್ಷೆ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದಿದೆ.

ಮೂರು ರಾಜ್ಯಗಳಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನ ಗಳಿಸಬೇಕಾಗುತ್ತದೆ. ಮಾರ್ಚ್ 2 ರಂದು ಫಲಿತಾಂಶ ಹೊರಬೀಳಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ