ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ : ನರೇಂದ್ರ ಮೋದಿ

ಬುಧವಾರ, 29 ಮಾರ್ಚ್ 2023 (14:50 IST)
ನವದೆಹಲಿ : ಉತ್ತರದಿಂದ ದಕ್ಷಿಣ ಭಾರತಕ್ಕೆ ಬಿಜೆಪಿ ವಿಸ್ತರಣೆಯಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನೂತನವಾಗಿ ನಿರ್ಮಿಸಿರುವ ಬಿಜೆಪಿ ಕೇಂದ್ರ ಕಚೇರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
 
ದೇಶದಲ್ಲಿ ಕುಟುಂಬ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ ಬಿಜೆಪಿ ಈಗ ಪ್ಯಾನ್-ಇಂಡಿಯಾ ಪಕ್ಷವಾಗಿದೆ. ಬಿಜೆಪಿಯು ವಿಶ್ವದ ಅತಿದೊಡ್ಡ, ಅತ್ಯಂತ ಭವಿಷ್ಯದ ಪಕ್ಷವಾಗಿದೆ. ಅದರ ಏಕೈಕ ಗುರಿ ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಮಾಡುವುದು.

ಯುಪಿಎ 2004-14ರ ಆಡಳಿತದಲ್ಲಿ ಪಿಎಂಎಲ್ಎ ಅಡಿಯಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಬಿಜೆಪಿಯ 9 ವರ್ಷಗಳ ಸರ್ಕಾರದ ಅವಧಿಯಲ್ಲಿ 1.10 ಲಕ್ಷ ಕೋಟಿ ವಶಪಡಿಸಿಕೊಂಡಿದೆ. ಸುಳ್ಳು ಆರೋಪಗಳಿಂದ ಭ್ರಷ್ಟಾಚಾರದ ಮೇಲಿನ ನಮ್ಮ ಕಡಿವಾಣ ನಿಲ್ಲುವುದಿಲ್ಲ. ನಮ್ಮ ಕೆಲಸದಿಂದ ಕೆಲವರು ಕೋಪಗೊಂಡಿದ್ದಾರೆ ಎಂದು ವಿಪಕ್ಷಗಳಿಗೆ ಮೋದಿ ಟಾಂಗ್ ಕೊಟ್ಟರು.

ಬಿಜೆಪಿ ಇಂದು ಮೊದಲ ಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಬಿಜೆಪಿಯೊಂದೇ ಭರವಸೆಯಾಗಿದೆ. ಆಂದ್ರಪ್ರದೇಶದದಲ್ಲಿ ಬಿಜೆಪಿ ಮೇಲೆ ವಿಶ್ವಾಸ ಹೆಚ್ಚುತಿದೆ. ತಮಿಳುನಾಡು, ಕೇರಳದಲ್ಲಿ ಪ್ರತಿ ಬೂತ್ನಲ್ಲಿ ಬಿಜೆಪಿ ಬಲಿಷ್ಠವಾಗುತ್ತಿದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಪರಿಕಲ್ಪನೆ ನಮ್ಮನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ