ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್‌ ದಿಗ್ವಿಜಯ

geetha

ಶನಿವಾರ, 24 ಫೆಬ್ರವರಿ 2024 (20:20 IST)
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಟ್ಟಾಗಿ 23-25 ಸ್ಥಾನಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್‌ ಗೆ 2-5 ಸ್ಥಾನಗಳು ಸಿಗಬಹುದು ಎಂದು ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಗ್ಗಟ್ಟಾಗಿ ರಾಜ್ಯದ ಬಹುತೇಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಿ ಮಾರ್ಕ್‌ ತನ್ನ ಸಮೀಕ್ಷೆಯ ಮೂಲಕ ಭವಿಷ್ಯ ನುಡಿದಿದೆ.ಒಟ್ಟಾರೆ ಮತ ಪ್ರಮಾಣದಲ್ಲಿ ಶೇ 55 ರಷ್ಟು ಬಿಜೆಪಿ ಮತ್ತು ಜೆಡಿಎಸ್‌ ಪಾಲಾಗಲಿದ್ದು, ಶೇ 39 ರಷ್ಟು ಮತಗಳನ್ನು ಕಾಂಗ್ರೆಸ್‌ ಪಡೆಯಲಿದೆ ಎಂದು ಅಭಿಪ್ರಾಯ ಸಂಗ್ರಹಣೆಯಲ್ಲಿ ತಿಳಿದುಬಂದಿರುವುದಾಗಿ ಸಮೀಕ್ಷೆ ಹೇಳಿದೆ. 
 
ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‌ ಚಾಮರಾಜನಗರ, ಬಳ್ಳಾರಿ, ಕೋಲಾರ ದಲ್ಲಿ ಮಾತ್ರ ಗೆಲ್ಲುವುದು ಖಚಿತವಾಗಿದ್ದು, ಮಿಕ್ಕ ಸ್ಥಾನಗಳು ಬಿಜೆಪಿ ಮತ್ತು ಜೆಡಿಎಸ್‌ ಒಕ್ಕೂಟದ ಪಾಲಾಗಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ