ಆರೆಸ್ಸೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

ಸೋಮವಾರ, 8 ಮೇ 2017 (18:22 IST)
ಬಿಜೆಪಿ ಮುಖಂಡನ ನಿವಾಸಕ್ಕೆ ನುಗ್ಗಿದ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.
ನಿನ್ನೆ ರಾತ್ರಿ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಹರಿತವಾದ ಆಯುಧಗಳೊಂದಿಗೆ ದಾಳಿ ಮಾಡಿದ್ದರಿಂದ ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವೆನ್ನಾಲಾ ಸಜೀವನ್ ಅವರ ಬಲಗಾಲಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ತಿರಿಕ್ಕಕಾರಾ ಪ್ರದೇಶದ ಸ್ಥಳೀಯ ಆರೆಸ್ಸೆಸ್ ಕಾರ್ಯಕರ್ತರು ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಬಿಜೆಪಿ ಮುಖಂಡ ವೆನ್ನಾಲಾ ಸಜೀವನ್ ಹೇಳಿಕೆ ನೀಡಿದ್ದರಿಂದ, ನಾಲ್ವರು ಆರೆಸ್ಸೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಸಜೀವನ್ ಮತ್ತು ಆರೆಸ್ಸೆಸ್ ನಾಯಕರ ವೈಯಕ್ತಿಕ ದ್ವೇಷವೇ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ